alex Certify ನಿಯಂತ್ರಣಕ್ಕೆ ಬಾರದ ಹಿಂಸಾಚಾರ: ಕಂಡಲ್ಲಿ ಗುಂಡಿಕ್ಕಲು ಆದೇಶಕ್ಕೆ ಮಣಿಪುರ ರಾಜ್ಯಪಾಲರ ಅಂಕಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಂತ್ರಣಕ್ಕೆ ಬಾರದ ಹಿಂಸಾಚಾರ: ಕಂಡಲ್ಲಿ ಗುಂಡಿಕ್ಕಲು ಆದೇಶಕ್ಕೆ ಮಣಿಪುರ ರಾಜ್ಯಪಾಲರ ಅಂಕಿತ

ಇಂಪಾಲ್: ಆದಿವಾಸಿಗಳು ಮತ್ತು ಬಹುಸಂಖ್ಯಾತ ಮೈತೆ ಸಮುದಾಯದ ನಡುವೆ ರಾಜ್ಯಾದ್ಯಂತ ಘರ್ಷಣೆಗಳು ಭುಗಿಲೆದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮಣಿಪುರ ರಾಜ್ಯಪಾಲರು ಗುರುವಾರ ರಾಜ್ಯ ಗೃಹ ಇಲಾಖೆಯ ಶೂಟ್-ಆಟ್-ಸೈಟ್ ಆದೇಶಕ್ಕೆ ಅನುಮೋದನೆ ನೀಡಿದ್ದಾರೆ.

ಮೇ 3 ಬುಧವಾರ ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆಯಲ್ಲಿ ಹಿಂಸಾಚಾರದ ಘಟನೆಗಳು ನಡೆದಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮುಂದಿನ ಹಂತವಾಗಿ ಕಂಡಲ್ಲಿ ಗುಂಡಿಕ್ಕಲು ಆದೇಶ ಹೊರಡಿಸಲಾಗಿದೆ.

ಮಣಿಪುರ ರಾಜ್ಯಪಾಲರು ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗಳು ಮತ್ತು ಎಲ್ಲಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ಗಳು/ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ಗಳು ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಮನವೊಲಿಸುವಿಕೆ, ಎಚ್ಚರಿಕೆ, ಸಮಂಜಸವಾದ ಬಲ, ಇತ್ಯಾದಿಗಳ ರೂಪಗಳ ಮೂಲಕ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಆದೇಶಗಳನ್ನು ಹೊರಡಿಸಲು ಅಧಿಕಾರ ನೀಡಿದ್ದಾರೆ.

9,000 ಜನರ ರಕ್ಷಣೆ

ಮಣಿಪುರದಲ್ಲಿ ಪರಿಸ್ಥಿತಿ ಹದಗೆಟ್ಟಿದ್ದರಿಂದ ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ 55 ತುಕಡಿಗಳನ್ನು ನಿಯೋಜಿಸಲಾಗಿದ್ದು, 14 ತುಕಡಿಗಳನ್ನು ಸ್ಟ್ಯಾಂಡ್‌ಬೈನಲ್ಲಿ ಇರಿಸಲಾಗಿದೆ. ಇದುವರೆಗೆ 9,000 ಜನರನ್ನು ಹಿಂಸಾಚಾರ ಪೀಡಿತ ಪ್ರದೇಶಗಳಿಂದ ಪಡೆಗಳು ರಕ್ಷಿಸಿ ಆಶ್ರಯ ನೀಡಿವೆ. ಹೆಚ್ಚಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ರಕ್ಷಣಾ ವಕ್ತಾರರು ಗುರುವಾರ ತಿಳಿಸಿದ್ದಾರೆ,

ಪರಿಶಿಷ್ಟ ಪಂಗಡದ(ಎಸ್‌ಟಿ) ಸ್ಥಾನಮಾನಕ್ಕಾಗಿ ಬುಡಕಟ್ಟು ಜನರಲ್ಲದ ಮೈತೀಸ್‌ ಗಳ ಬೇಡಿಕೆ ವಿರೋಧಿಸಿ ಚುರಾಚಂದ್‌ ಪುರ ಜಿಲ್ಲೆಯ ಟೊರ್‌ ಬಂಗ್ ಪ್ರದೇಶದಲ್ಲಿ ಎಲ್ಲಾ ಬುಡಕಟ್ಟು ವಿದ್ಯಾರ್ಥಿ ಒಕ್ಕೂಟ ಮಣಿಪುರ(ಎಟಿಎಸ್‌ಯುಎಂ) ಕರೆದ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಬುಧವಾರ ಮಣಿಪುರದ ಹಲವು ಜಿಲ್ಲೆಗಳಲ್ಲಿ ಹಿಂಸಾಚಾರಕ್ಕೆ ಕಾರಣವಾಗಿದೆ.

ರ್ಯಾಲಿಯಲ್ಲಿ ಸಾವಿರಾರು ಆಂದೋಲನಕಾರರು ಭಾಗವಹಿಸಿದ್ದರು, ಈ ಸಂದರ್ಭದಲ್ಲಿ ಆದಿವಾಸಿಗಳು ಮತ್ತು ಆದಿವಾಸಿಗಳಲ್ಲದವರ ನಡುವೆ ಘರ್ಷಣೆಗಳು ಭುಗಿಲೆದ್ದವು.

ಹಿಂಸಾಚಾರದ ನಂತರ, ಮಣಿಪುರದ 8 ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಯಿತು ಮತ್ತು ಮುಂದಿನ ಐದು ದಿನಗಳವರೆಗೆ ಇಡೀ ಈಶಾನ್ಯ ರಾಜ್ಯದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...