ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಲ್ಪಟ್ಟಿದ್ದ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಮೂಲಕ ಮನೀಶ್ ಸಿಸೋಡಿಯಾ 17 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. 2 ಲಕ್ಷ ಬಾಂಡ್, ಇಬ್ಬರು ಶ್ಯುರಿಟಿ ನೀಡಬೇಕು, ಪಾಸ್ ಪೋರ್ಟ್ ಒಪ್ಪಿಸುವಂತೆ ಕೋರ್ಟ್ ಸೂಚಿಸಿದೆ.
ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು 2023ರ ಫೆ.26ರಂದು ಸಿಬಿಐ ಬಂಧಿಸಿತ್ತು. ಬಳಿಕ ಇಡಿ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಎರಡೂ ಪ್ರಕರಣದಲ್ಲಿಯೂ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.