ನವದೆಹಲಿ: ಮನೀಶ್ ಸಿಸೋಡಿಯಾ ದೆಹಲಿ ಉಪಮುಖ್ಯಮಂತ್ರಿಯಾಗಿ ಮರಳಲಿದ್ದಾರೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಜಂಗ್‌ಪುರದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಭಾನುವಾರ ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಎಎಪಿ ಮತ್ತೆ ಸರ್ಕಾರ ರಚಿಸಿದರೆ ಮನೀಶ್ ಸಿಸೋಡಿಯಾ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಲಾಗುವುದು ಎಂದು ಹೇಳಿದರು.
ಎಎಪಿ ದೆಹಲಿಯಲ್ಲಿ ಸರ್ಕಾರ ರಚಿಸುತ್ತದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ನಮ್ಮ ಮುಂದಿನ ಸರ್ಕಾರದಲ್ಲೂ ಮನೀಶ್ ಸಿಸೋಡಿಯಾ ಉಪಮುಖ್ಯಮಂತ್ರಿಯಾಗಿರುತ್ತಾರೆ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದರು.
ಜಂಗ್‌ಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಸಿಸೋಡಿಯಾ, ಜನರು ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ಮುಖ್ಯಮಂತ್ರಿಯಾಗಿ ನೋಡಲು ಬಯಸುತ್ತಾರೆ. ಇಡೀ ದೆಹಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಆಯ್ಕೆ ಮಾಡುತ್ತಿರುವಾಗ, ನಾನು ಶಿಕ್ಷಣದ ಮೇಲೆ ಹೆಚ್ಚು ಕೆಲಸ ಮಾಡಲು ಮತ್ತು ಅರವಿಂದ್ ಕೇಜ್ರಿವಾಲ್ ಅವರ ದೃಷ್ಟಿಕೋನಕ್ಕೆ ಅನುಗುಣವಾಗಿ ಕೆಲಸ ಮಾಡಲು ನನ್ನನ್ನು ಆಯ್ಕೆ ಮಾಡಬೇಕು. ನಾನು ಜಂಗ್‌ಪುರದ ಸುಧಾರಣೆಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
पूरा जंगपुरा कह रहा है – ‘आप’ ने जो किया, वो कोई नहीं कर पाया। इस बार भी ‘आप’ को ही जिताएंगे। https://t.co/JJa91U2AQJ
— Arvind Kejriwal (@ArvindKejriwal) January 26, 2025