ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ 100 ಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ, ಸುಧಾರಿತ ಕೋಡಿಂಗ್ ಮಾದರಿಗಳನ್ನು ಪರಿಚಯಿಸಲು ಅಮೆಜಾನ್ ಫ್ಯೂಚರ್ ಇಂಜಿನಿಯರ್ ಕಾರ್ಯಕ್ರಮ ವಿಸ್ತರಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾಮಾನ್ಯ ಕಂಪ್ಯೂಟರ್ ವಿಜ್ಞಾನ ಶಿಕ್ಷಣಕ್ಕೆ ಅಮೆಜಾನ್ ಆದ್ಯತೆ ನೀಡಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ 100 ಶಾಲೆಗಳಿಗೆ ಕಾರ್ಯಕ್ರಮ ವಿಸ್ತರಿಸಲಾಗಿದ್ದು, ರಾಜ್ಯದ 30 ಜಿಲ್ಲೆಗಳ 13,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಯೋಜನ ಸಿಗಲಿದೆ ಎಂದು ತಿಳಿಸಿದ್ದಾರೆ.
ಅಮೆಜಾನ್ ಫ್ಯೂಚರ್ ಇಂಜಿನಿಯರ್ ಕಾರ್ಯಕ್ರಮದ ಸುಧಾರಿತ ಕೋಡಿಂಗ್ ಮತ್ತು ಕೃತಕ ಬುದ್ಧಿಮತ್ತೆ ಮಾದರಿಗಳ ಸಂಯೋಜನೆಯು ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸಲು ಸೂಕ್ತವಾಗಿದೆ. ಕಂಪ್ಯೂಟರ್ ವಿಜ್ಞಾನ ಮತ್ತು ಕೋಡಿಂಗ್ ವಿದ್ಯಾರ್ಥಿಗಳ ಪ್ರಸ್ತುತ ಪರಿಚಯ ಪರಿಗಣನೆಗೆ 20 ಗಂಟೆಗಳ ಮಾದರಿ ವಿನ್ಯಾಸಗೊಳಿಸಿದ್ದು, 6ನೇ ತರಗತಿ ವಿದ್ಯಾರ್ಥಿಗಳಿಗೆ ಬ್ಲಾಕ್ ಪ್ರೋಗ್ರಾಮ್ ಮೂಲಭೂತ ಅಂಶಗಳನ್ನು ಕಲಿಸಲಾಗುವುದು ಎಂದು ತಿಳಿಸಿದ್ದಾರೆ.