
ಮಂಗಳೂರು: ವ್ಯಕ್ತಿಯೋರ್ವರು ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಮೂಲದ ಪ್ರಶಾಂತ್ (35) ನದಿಗೆ ಹಾರಿದವರು. ಕುಟುಂಬಸ್ಥರ ಜೊತೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಬಂದಿದ್ದ ಪ್ರಶಾಂತ್ ಕುಟುಂಬದವರನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ನೇತ್ರಾವತಿ ನದಿ ಸೇತುವೆ ಬಳಿ ಕಾರಿನಲ್ಲಿ ಬಂದಿದ್ದಾರೆ. ಬಳಿಕ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿದ್ದಾರೆ ಎಂದು ತಿಳಿದುಬಂದಿದೆ.
ಕಂಕನಾಡಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪ್ರಶಾಂತ್ ಗಾಗಿ ನದಿಯಲ್ಲಿ ಶೋಧ ನಡೆಸಿದ್ದಾರೆ. ಕುಟುಂಬದ ಜೊತೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ಏಕಾಏಕಿ ದುಡುಕಿನ ನಿರ್ಧರ ಕೈಗೊಳ್ಳಲು ನಿಖರ ಕಾಣ ತಿಳಿದುಬಂದಿಲ್ಲ.