
ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರೊಂದಿಗೆ ಅದೇ ಹೆಸರಿನ ಇನ್ನೂ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಎನ್. ಸುಧಾಕರ್ ಮತ್ತು ಡಿ. ಸುಧಾಕರ್ ಹೆಸರಿನ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಂಜುನಾಥ್ ಹೆಸರಿನ ಇಬ್ಬರು ಮತ್ತು ಸುರೇಶ್ ಹೆಸರಿನ ಮೂವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮಂಜುನಾಥ್ ಹೆಸರಿನ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ ಮೂವರು ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ. ಕಣದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್, ಬಹುಜನ ಭಾರತ ಪಕ್ಷದ ಅಭ್ಯರ್ಥಿ ಸಿ.ಎನ್. ಮಂಜುನಾಥ್ ಉಳಿದುಕೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್, ಕರುನಾಡ ಪಾರ್ಟಿಯ ಸುರೇಶ್ ಎಸ್., ಪಕ್ಷೇತರ ಅಭ್ಯರ್ಥಿ ಸುರೇಶ್ ಎಂ. ಎನ್. ಕೂಡ ಸ್ಪರ್ಧೆಯಲ್ಲಿದ್ದಾರೆ.