ಮಂಡ್ಯ: ಕೆಲ ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಮೆಗಾ ಡೈರಿ ಮಂಡ್ಯ ಜಿಲ್ಲೆಯ ಮನ್ ಮುಲ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಧಿಕಾರಿಗಳ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ.
ಮಂಡ್ಯದ ಮದ್ದೂರು ತಾಲೂಕಿನ ಗಜ್ಜಲಗೆರೆ ಗ್ರಾಮದ ಮನ್ ಮುಲ್ ಕಟ್ಟಡದ ಪ್ಯಾಕಿಂಗ್ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಈ ಘಟನೆ ಬೆನ್ನಲ್ಲೇ ಮನ್ ಮುಲ್ ಕಟ್ಟಡ ನಿರ್ಮಾಣಕ್ಕೂ ಮುನ್ನ ಅಗ್ನಿಶಾಮಕ ಇಲಾಖೆಯಿಂದ ಎನ್ಒಸಿ ಪಡೆದಿಲ್ಲ ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ.
ಮೆಗಾ ಡೈರಿ ಬೃಹತ್ ಕಟ್ಟಡ ನಿರ್ಮಾಣದ ವೇಳೆ ಅಗ್ನಿಶಾಮಕ ಇಲಾಖೆಯಿಂದ ಎನ್ ಒಸಿ ಪಡೆಯದೇ ಯಾವುದೇ ಸುರಕ್ಷತಾ ಕ್ರಮಗಳನ್ನೂ ಕೈಗೊಳ್ಳದೇ ಕಟ್ಟಡ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. 2016ರ ನಿಯಮದ ಪ್ರಕಾರ ಕಟ್ಟಡ ನಿರ್ಮಾಣಕ್ಕೂ ಮುನ್ನ ಎನ್ ಒ ಸಿ ಪಡೆಯುವುದು ಕಡ್ಡಾಯ. ಆದರೆ ಮನ್ ಮುಲ್ ಆಡಳಿತ ಮಂಡಳಿ ಈವರೆಗೂ ಎನ್ ಒಸಿ ಪಡೆದಿಲ್ಲ ಎಂದು ತಿಳಿದುಬಂದಿದೆ.