ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ದೇಶದಲ್ಲಿ ಕೋವಿಡ್ ಪರಿಸ್ಥಿತಿ ಕುರಿತಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೋದಿಯವರ ‘ಮನ್ ಕಿ ಬಾತ್’ ಬಿತ್ತರವಾಗಲಿದೆ. ಕೊರೋನಾ ಪರಿಸ್ಥಿತಿ, ಆಕ್ಸಿಜನ್, ಔಷಧ ಸೇರಿ ವೈದ್ಯಕೀಯ ಸೌಲಭ್ಯ, ಕೊರೋನಾ ಲಸಿಕೆ, ಕಟ್ಟುನಿಟ್ಟಿನ ನಿಯಮ ಪಾಲನೆ, ಸಂಕಷ್ಟದಲ್ಲಿರುವವರಿಗೆ ನೆರವು ನೀಡಲು ವಿಶೇಷ ಪ್ಯಾಕೇಹ್ ಮೊದಲಾದ ವಿಷಯಗಳ ಬಗ್ಗೆ ಮಾತನಾಡುವ ಸಾಧ್ಯತೆ ಇದೆ.
ಜೂನ್ 30 ರವರೆಗೆ ಕಠಿಣ ನಿರ್ಬಂಧಗಳನ್ನು ಮುಂದುವರೆಸುವಂತೆ ಕೇಂದ್ರದಿಂದ ರಾಜ್ಯಗಳಿಗೆ ಸಲಹೆ ನೀಡಿದ್ದು, ಇದರ ಬಗ್ಗೆಯೂ ಮೋದಿ ಮಾತನಾಡುವ ಸಾಧ್ಯತೆ ಇದೆ ಎನ್ನಲಾಗಿದೆ.