alex Certify ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಗೆ ಮಾಜಿ ಸಚಿವ ಗುಡ್ ಬೈ: ಬೆಂಬಲಿಗರ ಸಭೆಯಲ್ಲಿ ಘೋಷಣೆ: ಜೆಡಿಎಸ್ ಅಭ್ಯರ್ಥಿಯಾಗಿ ಮನೋಹರ ತಹಶೀಲ್ಡಾರ್ ಸ್ಪರ್ಧೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಗೆ ಮಾಜಿ ಸಚಿವ ಗುಡ್ ಬೈ: ಬೆಂಬಲಿಗರ ಸಭೆಯಲ್ಲಿ ಘೋಷಣೆ: ಜೆಡಿಎಸ್ ಅಭ್ಯರ್ಥಿಯಾಗಿ ಮನೋಹರ ತಹಶೀಲ್ಡಾರ್ ಸ್ಪರ್ಧೆ

ಹಾವೇರಿ: ಮಾಜಿ ಸಚಿವ ಮನೋಹರ ತಹಶೀಲ್ದಾರ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಅವರು ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಶ್ರೀನಿವಾಸ ಮಾನೆಯವರಿಗೆ ಕಾಂಗ್ರೆಸ್ ನಿಂದ ಹಾನಗಲ್ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಸ್ಥಳೀಯರಿಗೆ ಹಾನಗಲ್ ಟಿಕೆಟ್ ಕೊಡಬೇಕು ಎಂದು ಮನೋಹರ್ ತಹಶೀಲ್ದಾರ್ ಆಗ್ರಹಿಸಿದ್ದರು. ಆದರೆ, ಶ್ರೀನಿವಾಸ ಮಾನೆ ಅವರಿಗೆ ಟಿಕೆಟ್ ಕೊಡಲಾಗಿದೆ. ಟಿಕೆಟ್ ಕೈತಪ್ಪಿದ್ದರಿಂದ ಮನೋಹರ ತಹಶೀಲ್ದಾರ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಹಾನಗಲ್ ನಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಈ ಬಗ್ಗೆ ಮನೋಹರ ತಹಶೀಲ್ದಾರ್ ಘೋಷಣೆ ಮಾಡಿದ್ದಾರೆ. ಏಪ್ರಿಲ್ 7ರಂದು ಜೆಡಿಎಸ್ ಪಕ್ಷಕ್ಕೆ ಸೇರುವುದಾಗಿ ಘೋಷಿಸಿದ್ದಾರೆ. ಹಾನಗಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮನೋಹರ್ ತಹಶೀಲ್ದಾರ್ ಸ್ಪರ್ಧಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...