alex Certify ಆತ್ಮಹತ್ಯೆಗೆ ಯತ್ನಿಸಿದ ಮಿಸ್ಟರ್ ಇಂಡಿಯಾ ಬಾಡಿ ಬಿಲ್ಡರ್….! ಇದಕ್ಕೆ ಕಾರಣನಾದ ನಟ ಯಾರು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮಹತ್ಯೆಗೆ ಯತ್ನಿಸಿದ ಮಿಸ್ಟರ್ ಇಂಡಿಯಾ ಬಾಡಿ ಬಿಲ್ಡರ್….! ಇದಕ್ಕೆ ಕಾರಣನಾದ ನಟ ಯಾರು ಗೊತ್ತಾ….?

ಮಿಸ್ಟರ್ ಇಂಡಿಯಾ ಬಾಡಿಬಿಲ್ಡರ್ ಮನೋಜ್ ಪಾಟೀಲ್ ಮುಂಬೈನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೋಜ್ ಪಾಟೀಲ್, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡೆತ್ ನೋಟ್ ನಲ್ಲಿ ನಟ ಸಾಹಿಲ್ ಖಾನ್ ವಿರುದ್ಧ ಮನೋಜ್ ಪಾಟೀಲ್ ಆರೋಪ ಮಾಡಿದ್ದಾರೆ. ಸಾಹಿಲ್ ಖಾನ್ ಸೈಬರ್ ಬುಲ್ಲಿಂಗ್ ಮತ್ತು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಮನೋಜ್ ಪಾಟೀಲ್ ಆರೋಪಿಸಿದ್ದಾರೆ.

ಸದ್ಯ ಮನೋಜ್ ಪಾಟೀಲ್ ಅವರನ್ನು ಮುಂಬೈನ ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೋಜ್ ಪಾಟೀಲ್, ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬುಧವಾರ ರಾತ್ರಿ ಮನೋಜ್ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಟ ಸಾಹಿಲ್ ಖಾನ್, ಕಳೆದ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದಾರೆ ಎಂದು ಮನೋಜ್ ಪಾಟೀಲ್ ಆರೋಪಿಸಿದ್ದಾರೆ.

ಕಿರುಕುಳ ಮತ್ತು ಅಪಪ್ರಚಾರದಿಂದಾಗಿ ಆತ್ಮಹತ್ಯೆಗೆ ಮುಂದಾಗಿರುವುದಾಗಿ ಮನೋಜ್ ಪಾಟೀಲ್ ಹೇಳಿದ್ದಾರೆ. ಮನೋಜ್ ಪಾಟೀಲ್, ಮಿಸ್ಟರ್ ಒಲಂಪಿಯಾದಲ್ಲಿ ಪಾಲ್ಗೊಳ್ಳುವ ಪ್ರಯತ್ನದಲ್ಲಿದ್ದರು. ಸ್ಪರ್ಧೆಯಲ್ಲಿ ಪಾಲ್ಗೊಳ್ಳದಂತೆ ಸಾಹಿಲ್ ಖಾನ್ ಕಿರುಕುಳ ನೀಡ್ತಿದ್ದರು ಎನ್ನಲಾಗಿದೆ.

ಮನೋಜ್ ಪಾಟೀಲ್ ಕುಟುಂಬ, ಓಶಿವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಮನೋಜ್ ಪಾಟೀಲ್ ಕುಟುಂಬವು ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರನ್ನು ಭೇಟಿ ಮಾಡಿ ಸಹಾಯಕ್ಕಾಗಿ ಮನವಿ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...