![](https://kannadadunia.com/wp-content/uploads/2025/02/kadidal-prakash.png)
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.
ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಬಿ.ಎಲ್. ಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಕಳೆದ ಜನವರಿ 24 ರಂದು ಕುಪ್ಪಳಿಯ ಹೇಮಾಂಗಣದಲ್ಲಿ ಕಡಿದಾಳ್ ಪ್ರಕಾಶ್ ಅವರ ಸಂಬಂಧಿಕರ ಕುಟುಂಬದ ಮಂತ್ರ ಮಾಂಗಲ್ಯ ವಿವಾಹ ಅದ್ದೂರಿಯಾಗಿ ನೆರವೇರಿಸಿದ್ದು ವ್ಯಾಪಕ ಟೀಕೆಗೆ ಕಾರಣವಾಗಿತ್ತು.
ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರ ಕುಟುಂಬದವರೇ ಅದ್ದೂರಿಯಾಗಿ ಮಂತ್ರ ಮಾಂಗಲ್ಯ ಆಚರಿಸಿ ಕುವೆಂಪು ಆಶಯಕ್ಕೆ ಧಕ್ಕೆ ತಂದಿರುವುದಾಗಿ ವಿರೋಧ ವ್ಯಕ್ತವಾಗಿತ್ತು. ತಮ್ಮ ಸಂಬಂಧಿಕರ ಮದುವೆ ಎಂಬುದನ್ನು ಒಪ್ಪಿಕೊಂಡಿದ್ದ ಕಡಿದಾಳ್ ಪ್ರಕಾಶ್, ಇಂತಹ ಮದುವೆಗಳಿಗೆ ಮುಂದೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರು. ಇದೀಗ ಅವರು ರಾಜೀನಾಮೆ ನೀಡಿದ್ದಾರೆ.