ರಾಯಚೂರು: ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯ ಮಾಡಬಾರದು ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಹೇಳಿದ್ದಾರೆ.
ಮಂಗಳೂರಿನಲ್ಲಿ ಹತ್ಯೆಯಾದ ಮುಸ್ಲಿಂ ಮತ್ತು ಹಿಂದೂ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ಸರ್ಕಾರದಿಂದ ತಾರತಮ್ಯ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಾಣ ಕಳೆದುಕೊಂಡವರೆಲ್ಲರೂ ಸಮಾನರು. ಎಲ್ಲರಿಗೂ ಸರ್ಕಾರ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ.
ಹತ್ಯೆಯಾದ ವ್ಯಕ್ತಿಯ ಕುಟುಂಬಕ್ಕೆ ಹಣ ಕೊಡುವುದು ಸಾವಿಗೆ ಪರ್ಯಾಯವಲ್ಲ. ಜೀವ ಮತ್ತು ಹಣವನ್ನು ಹೋಲಿಕೆ ಮಾಡಲಾಗದು. ಅನಾಹುತ ನಡೆಯದಂತೆ ರಕ್ಷಣೆ ನೀಡುವುದು ಸರ್ಕಾರದ ಮೊದಲ ಕರ್ತವ್ಯವಾಗಬೇಕು. ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಬಾರದು. ಎಲ್ಲರಿಗೂ ಸರ್ಕಾರ ಪರಿಹಾರ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.