ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಬಲ್ ಒಲಿಂಪಿಕ್ ಪದಕ ವಿಜೇತ ಶೂಟರ್ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್ ಅವರಿಗೆ ಪ್ರತಿಷ್ಠಿತ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನೀಡಿದರು.
22 ವರ್ಷದ ಭಾಕರ್ ಒಲಿಂಪಿಕ್ಸ್ ಒಂದೇ ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದ ಸ್ವತಂತ್ರ ಭಾರತದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಕಳೆದ ವರ್ಷ ಆಗಸ್ಟ್ನಲ್ಲಿ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ವೈಯಕ್ತಿಕ ಮತ್ತು 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಗಳಲ್ಲಿ ಕಂಚಿನ ಪದಕ ಗೆದ್ದಿದ್ದರು. ಮತ್ತೊಂದೆಡೆ, 18 ವರ್ಷದ ಗುಕೇಶ್ ಕಳೆದ ತಿಂಗಳು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಅತ್ಯಂತ ಕಿರಿಯ ವಿಶ್ವ ಚಾಂಪಿಯನ್ ಆದರು. ವಿಶ್ವನಾಥನ್ ಆನಂದ್ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಭಾಕರ್ ಮತ್ತು ಗುಕೇಶ್ ಅವರಲ್ಲದೆ, ಪುರುಷರ ಹಾಕಿ ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಕ್ಸ್ ಚಿನ್ನದ ಪದಕ ವಿಜೇತ ಹೈಜಂಪರ್ ಪ್ರವೀಣ್ ಕುಮಾರ್ ಅವರಿಗೂ ಅತ್ಯುನ್ನತ ಗೌರವ ನೀಡಲಾಯಿತು. ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ತಂಡದಲ್ಲಿ ಹರ್ಮನ್ಪ್ರೀತ್ ಇದ್ದರೆ, ಪ್ರವೀಣ್ ಕಳೆದ ವರ್ಷ ಪ್ಯಾರಿಸ್ನಲ್ಲಿ ಹೈಜಂಪ್ನಲ್ಲಿ ಚಿನ್ನ ಗೆದ್ದಿದ್ದರು.
#WATCH | President Droupadi Murmu presents National Sports and Adventure Awards 2024 at Rashtrapati Bhavan
(Source: President of India’s Twitter handle) pic.twitter.com/3N9hxJ7p43
— ANI (@ANI) January 17, 2025
ಒಟ್ಟು 32 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಅವರಲ್ಲಿ 17 ಮಂದಿ ಪ್ಯಾರಾ ಅಥ್ಲೀಟ್ ಗಳು. ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಪ್ಯಾರಾ-ಅಥ್ಲೀಟ್ಗಳು ಏಳು ಚಿನ್ನ ಮತ್ತು ಒಂಬತ್ತು ಬೆಳ್ಳಿ ಸೇರಿದಂತೆ 29 ಪದಕಗಳೊಂದಿಗೆ ಮರಳಿದರು.