ರಾಯಚೂರು: ಹಾಸ್ಟೆಲ್ ನಲ್ಲಿ ಊಟ ಸೇವಿಸಿದ 14 ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಘಟನೆ ನಡೆದಿದೆ.
ಅಸ್ವಸ್ಥ ವಿದ್ಯಾರ್ಥಿನಿಯರನ್ನು ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಓರ್ವ ವಿದ್ಯಾರ್ಥಿನಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ. ಮಧ್ಯಾಹ್ನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಪಲಾವ್ ಸೇವಿಸಿದ್ದರು. ಮಧ್ಯಾಹ್ನದ ಊಟದ ಸೇವಿಸಿದ ಬಳಿಕ ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಹಾಸ್ಟೆಲ್ ವಾರ್ಡನ್ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.