
ಬೆಂಗಳೂರು: ಮರಾಠ ಪ್ರಾಧಿಕಾರ ವಿರೋಧಿಸಿ ಡಿಸೆಂಬರ್ 5 ರಂದು ಕರ್ನಾಟಕ ರಾಜ್ಯ ಬಂದ್ ಗೆ ಕರೆ ನೀಡಲಾಗಿದೆ.
ಮರಾಠ ಪ್ರಾಧಿಕಾರ ರಚಿಸುವ ನಿರ್ಧಾರವನ್ನು ಕೈಬಿಡುವಂತೆ ಕನ್ನಡಪರ ಸಂಘಟನೆಗಳು 10 ದಿನಗಳ ಗಡುವು ನೀಡಿವೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರದ ನಡೆಗೆ ಕನ್ನಡಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿ ಪ್ರತಿಭಟನೆ ನಡೆಸಲಾಗಿದೆ. ನಿರ್ಧಾರ ಕೈಬಿಡದಿದ್ದರೆ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಯಡಿಯೂರಪ್ಪ, ಮರಾಠ ಅಭಿವೃದ್ಧಿ ಪ್ರಾಧಿಕಾರ ಮರಾಠಿ ಭಾಷೆಗೆ ಸಂಬಂಧಿಸಿಲ್ಲ. ರಾಝ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಲಾಗಿದೆ ಎಂದು ಹೇಳಿದ್ದಾರೆ.