alex Certify ಶರದ್ ಪವಾರ್ ನಿಂದಿಸಿದ ನಟಿಗೆ ಎದುರಾಯ್ತು ಸಂಕಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶರದ್ ಪವಾರ್ ನಿಂದಿಸಿದ ನಟಿಗೆ ಎದುರಾಯ್ತು ಸಂಕಷ್ಟ

ಸಾಮಾಜಿಕ ಮಾಧ್ಯಮದಲ್ಲಿ ಎನ್ ಸಿ ಪಿ ನಾಯಕ ಶರದ್ ಪವಾರ್ ಬಗ್ಗೆ ಅವಹೇಳನಾಕಾರಿ ಹೇಳಿಕೆಯನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಮರಾಠಿ ನಟಿ ಕೇತಕಿ ಚಿತಾಳೆಯನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ.

ಪವಾರ್ ಹೆಸರನ್ನು ಉಲ್ಲೇಖಿಸಿ “ನರಕ ನಿಮಗಾಗಿ ಕಾಯುತ್ತಿದೆ’’ ಮತ್ತು “ನೀವು ಬ್ರಾಹ್ಮಣರನ್ನು ದ್ವೇಷಿಸುತ್ತೀರಿ’’ ಎಂದು ಚಿತಾಳೆ ಪೋಸ್ಟ್ ಮಾಡಿದ್ದರು.

ಈ ಸಂಬಂಧ ಸ್ವಪ್ನಿಲ್ ನೇಟ್ಕೆ ಎಂಬುವರು ನೀಡಿದ ದೂರಿನ ಆಧಾರದಲ್ಲಿ ಚಿತಾಳೆ ವಿರುದ್ಧ ಥಾಣೆಯ ಕಲ್ವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಚಿತಾಳೆಯನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿತಾಳೆಯ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಎನ್ ಸಿ ಪಿ ಯ ಮಹಿಳಾ ಘಟಕದ ಸದಸ್ಯರು ಶನಿವಾರ ನವೀಮುಂಬೈನಲ್ಲಿರುವ ಚಿತಾಳೆ ಮನೆಯ ಮೇಲೆ ಕಪ್ಪು ಮಸಿ ಮತ್ತು ಮೊಟ್ಟೆಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಂದೆ – ಮಗನಿಂದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ ವಿದ್ಯುತ್‌ ಕಳ್ಳತನ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶರದ್ ಪವಾರ್, ಚಿತಾಳೆ ಯಾರೆಂಬುದು ನನಗೆ ಗೊತ್ತಿಲ್ಲ ಮತ್ತು ಆಕೆ ಸಾಮಾಜಿಕ ಮಾಧ್ಯಮದಲ್ಲಿ ಯಾವ ವಿಚಾರವನ್ನು ಪೋಸ್ಟ್ ಮಾಡಿದ್ದಾರೆ ಎಂಬುದೂ ತಿಳಿದಿಲ್ಲ ಎಂದಿದ್ದಾರೆ.

ಹಲವಾರು ಮರಾಠಿ ಧಾರಾವಾಹಿಗಳಲ್ಲಿ ನಟಿಸಿರುವ ಚಿತಾಳೆ, ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದು, ಆಗಾಗ್ಗೆ ಹಲವಾರು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇವುಗಳಲ್ಲಿ ಕೆಲವು ವಿವಾದಕ್ಕೂ ಗ್ರಾಸವಾಗಿವೆ. ಚಿತಾಳೆಯವರಿಗೆ ಇನ್ ಸ್ಟಾಗ್ರಾಂನಲ್ಲಿ 55,000 ಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...