ಬೆಂಗಳೂರು : ಮರಿತ್ತಿಬ್ಬೆ ಗೌಡ, ಅಪ್ಪಾಜಿಗೌಡ ಸೇರಿ ಹಲವು ಜೆಡಿಎಸ್ ನಾಯಕರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದು, ಕಾಂಗ್ರೆಸ್ ತತ್ವ, ಸಿದ್ಧಾಂತಗಳ ಮೇಲೆ ವಿಶ್ವಾಸವಿಟ್ಟು ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು ಹಾಗೂ ಜೆಡಿಎಸ್ ನಾಯಕರಾದ ಮರಿತ್ತಿಬ್ಬೆ ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಪ್ಪಾಜಿ ಗೌಡ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ವೆಂಕಟೇಶ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಯೋಗೇಶ್ ಹಾಗೂ ಬಿಜೆಪಿಯ ಮಾಜಿ ಬಿಬಿಎಂಪಿ ಸದಸ್ಯರಾದ ಶ್ರೀಮತಿ ಆಶಾ ಸುರೇಶ್ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಗೊಂಡರು. ಪಕ್ಷ ಬಲವರ್ಧನೆಗೆ ಕೈ ಜೋಡಿಸುತ್ತಿರುವ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಶುಭ ಹಾರೈಸಿದೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.