alex Certify ಸಂಭ್ರಮದ ಮದುವೆ ಮನೆಯಲ್ಲಿ ಸೂತಕದ ಛಾಯೆ: ವಿವಾಹವಾದ ನಾಲ್ಕೇ ದಿನಕ್ಕೆ ಕೊರೋನಾಗೆ ಮದುಮಗಳು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಭ್ರಮದ ಮದುವೆ ಮನೆಯಲ್ಲಿ ಸೂತಕದ ಛಾಯೆ: ವಿವಾಹವಾದ ನಾಲ್ಕೇ ದಿನಕ್ಕೆ ಕೊರೋನಾಗೆ ಮದುಮಗಳು ಬಲಿ

ಶಿವಮೊಗ್ಗ: ಮದುವೆಯಾದ 4 ದಿನದಲ್ಲೇ ಕೊರೋನಾ ಸೋಂಕಿನಿಂದ ಯುವತಿ ಸಾವು ಕಂಡ ಘಟನೆ ಶಿವಮೊಗ್ಗದ ಮಲವಗೊಪ್ಪದಲ್ಲಿ ನಡೆದಿದೆ.

ಮಲವಗೊಪ್ಪದ ಪೂಜಾ ಮೃತಪಟ್ಟವರು ಎಂದು ಹೇಳಲಾಗಿದೆ. ಮೇ 24 ರಂದು ಹರಿಗೆಯ ಮಹೇಶ್ ಜೊತೆಗೆ ಪೂಜಾ ಮದುವೆಯಾಗಿತ್ತು. ಮದುವೆಯಾದ ಮರು ದಿನದಿಂದಲೇ ಜ್ವರ ಕಾಣಿಸಿಕೊಂಡಿದೆ. ಸ್ಥಳೀಯ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆಕೊಂಡಿದ್ದ ಪೂಜಾ ಅವರಿಗೆ ಜ್ವರ ಜಾಸ್ತಿಯಾಗಿ ಮೆಗ್ಗಾನ್ ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾರೆ. ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ ಎನ್ನಲಾಗಿದ್ದು, ನವವಿವಾಹಿತೆ ನಿಧನದಿಂದಾಗಿ ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...