
ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಇಲಾಖೆಯ ಉಪನಿಬಂಧಕ ಸೇರಿ ಅವರ ಕುಟುಂಬದ 13 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸಂತ್ರಸ್ತ ಯುವತಿ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಆರೋಪಿ ಮಲ್ಲಯ್ಯ ಅಸಭ್ಯವಾಗಿ ವರ್ತಿಸಿ ಅತ್ಯಾಚಾರ ಎಸಗಿದ್ದಾನೆ. ನಂತರ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಮತ್ತೆ ಅತ್ಯಾಚಾರ ಎಸಗಿದ್ದು, ಯುವತಿ ಮದುವೆಯಾಗುವಂತೆ ಕೇಳಿಕೊಂಡಾಗ ತಿರಸ್ಕರಿಸಿದ್ದ ಎನ್ನಲಾಗಿದೆ. ಈ ಬಗ್ಗೆ ನೊಂದ ಯುವತಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.