
ಚಿತ್ರದುರ್ಗ: ಮುರುಘಾ ಮಠದ ಮುರುಘಾ ಶರಣರು ಅಪ್ರಾಪ್ತರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜೈಲು ಪಾಲಾಗಿದ್ದು, ಇದರ ನಡುವೆ ಮುರುಘಾ ಮಠದಲ್ಲಿ ಸೆಪ್ಟೆಂಬರ್ 5 ರಂದು ಸಾಮೂಹಿಕ ವಿವಾಹ ನಡೆಯಲಿದೆ.
ಪ್ರತಿ ತಿಂಗಳ 5ನೇ ತಾರೀಖಿನಂದು ಮಠದಲ್ಲಿ ನಡೆಯುತ್ತಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ ಯಾವುದೇ ಅಡ್ಡಿ ಆತಂಕಗಳಿಲ್ಲದೆ ನಡೆಯಲಿದೆ. ದಾಂಪತ್ಯ ಜೀವನಕ್ಕೆ ಕಾಲಿಡಲು 11 ಜೋಡಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ನಿಗದಿಯಂತೆಯೇ ಸೋಮವಾರ ಮಠದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗಿದೆ.