ಮೈಸೂರು: ವಿವಾಹಿತ ಮಹಿಳೆಯೊಂದಿಗೆ ಯುವಕನೊಬ್ಬ ಸಲುಗೆಯಿಂದ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆ ಬೆನ್ನಲ್ಲೇ ಮಹಿಳೆ ಹಾಗೂ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಹುಣಸೂರಿನ ಕಲ್ಕುಣಿಗೆ ನಿವಾಸಿ ಶೃತಿ ಹಾಗೂ ಮುರಳಿ ಆತ್ಮಹತ್ಯೆ ಮಾಡಿಕೊಂಡವರು.
ವಿವಾಹಿತ ಮಹಿಳೆ ಜೊತೆ ಇರುವ ಯುವಕನ ಫೋಟೋ ವೈರಲ್ ಆಗಿದ್ದರಿಂದ ಮನನೊಂದ ಮಹಿಳೆ ಶೃತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೃತಿ ಸಾವಿನ ಬೆನ್ನಲ್ಲೇ ಯುವಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಎಲೆಕ್ಟ್ರಿಷಿಯನ್ ಆಗಿದ್ದ ಯುವಕ ಮುರಳಿ, ಶೃತಿಯೊಂದಿಗಿರುವ ಫೋಟೋವನ್ನು ಅಪ್ ಲೋಡ್ ಮಾಡಿ ಸ್ಟೇಟಸ್ ನಲ್ಲಿ ಹಾಕಿದ್ದ. ಇದನ್ನು ನೋಡಿದ ಮಹಿಳೆಯ ಮನೆಯವರು ಹಾಗೂ ಯುವಕನ ಮನೆಯವರ ನಡುವೆ ಗಲಾಟೆ ನಡೆದಿದೆ. ಹೆದರಿದ ಇಬ್ಬರೂ ಸಾವಿಗೆ ಶರಣಾಗಿದ್ದಾರೆ.
ಹುಣಸೂರು ಠಾಣೆಯಲ್ಲಿ ಎರಡೂ ಕುಟುಂಬದವರು ಪರಸ್ಪರ ದೂರು ದಾಖಲಿಸಿದ್ದಾರೆ.