alex Certify BIG NEWS : ‘ಹುತಾತ್ಮ ಪೊಲೀಸ್ ಸಿಬ್ಬಂದಿ’ಗಳ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ : ಸಿಎಂ ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಹುತಾತ್ಮ ಪೊಲೀಸ್ ಸಿಬ್ಬಂದಿ’ಗಳ  ಗುಂಪು ವಿಮಾ ಮೊತ್ತ  20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಹುತಾತ್ಮ ಪೊಲೀಸ್ ಸಿಬ್ಬಂದಿಗಳ ಗುಂಪು ವಿಮಾ ಮೊತ್ತ 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

‍ಪೊಲೀಸ್ ಸಂಸ್ಕರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯ ಗುಂಪು ವಿಮೆ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಿಸಲಾಗುತ್ತದೆ ಎಂದು ಸಿಎಂ ಹೇಳಿದರು.

ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ 2152 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ಮೀಸಲಿಡಲಾಗುತ್ತದೆ, ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ಒದಗಿಸಲಾಗುತ್ತದೆ ಎಂದರು.  ಐದು ಸಂಚಾರಿ ಮತ್ತು ಆರು ಮಹಿಳಾ ಪೊಲೀಸ್ ಠಾಣೆ ಸ್ಥಾಪಿಸಲಾಗುತ್ತದೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...