ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮಾರುತಿ ನಾಯ್ಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಕಾರವರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕೆ.ಕುಸುಮಾಧರ, ಪಿಎಸ್ ಐ ಶಾಂತಿನಾಥ ಹಾಗೂ ಕಾನ್ಸ್ ಟೇಬಲ್ ದೇವರಾಜ್ ಅವರನ್ನು ಸಸ್ಪೆಂಡ್ ಮಾಡಿ ಉತ್ತರ ಕನ್ನಡ ಜಿಲ್ಲಾ ಎಸ್ ಪಿ ವಿಷ್ಣುವರ್ಧನ್ ಆದೇಶ ಹೊರಡಿಸಿದ್ದಾರೆ.
ದಲಿತ ಮುಖಂಡ ಎಲಿಷಾ ಎಂಬುವವರು ಹಿಂದೂ ಧರ್ಮದ ವಿರುದ್ಧ ಹೇಳಿಕೆಗಳನ್ನು ನೀಡಿದ್ದರು. ಈ ಬಗ್ಗೆ ವಿಡಿಯೋ ರೆಕಾರ್ಡ್ ಮಾಡಿದ್ದಕ್ಕೆ ಮಾರುತಿ ನಾಯ್ಕ್ ಮೇಲೆ ಹಲ್ಲೆ ಮಾಡಲಾಗಿತ್ತು. ಈ ಬಗ್ಗೆ ಮಾರುತಿ ನಾಯ್ಕ್ ಕಾರವಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಪೊಲೀಸರು ಆರೋಪಿಗಳ ಪರ ಕೆಲಸ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಡೆತ್ ನೋಟ್ ಬರೆದಿಟ್ಟು ಮಾರುತಿ ನಾಯ್ಕ್ ಆತ್ಮಹತ್ಯೆಗೆ ಶರಣಾಗಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್ ಪಿ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.