alex Certify ರಾಜ್ಯದಲ್ಲಿ ಮತ್ತೆ ಕೊರೊನಾ ಹೆಚ್ಚಳ: ಶಾಲೆ, ಕಾಲೇಜ್, ಬಸ್, ರೈಲ್, ಹೋಟೆಲ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಮತ್ತೆ ಕೊರೊನಾ ಹೆಚ್ಚಳ: ಶಾಲೆ, ಕಾಲೇಜ್, ಬಸ್, ರೈಲ್, ಹೋಟೆಲ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿರಂತರವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಸರ್ಕಾರದ ಸುತ್ತೋಲೆ ಹೊರಡಿಸಿದೆ.

ಪೊಲೀಸರನ್ನು ಬಳಸಿ ಕಟ್ಟುನಿಟ್ಟಾಗಿ ನಿಯಮ ಜಾರಿಗೆ ಸೂಚಿಸಲಾಗಿದೆ. ಹೋಟೆಲ್, ಕಚೇರಿ, ಶಾಪಿಂಗ್ ಮಾಲ್ ಗಳು, ಶಾಲೆ-ಕಾಲೇಜು, ಬಸ್, ರೈಲುಗಳಲ್ಲಿಯೂ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ಸದ್ಯಕ್ಕೆ ದಂಡ ವಿಧಿಸುವುದಿಲ್ಲ ಮತ್ತು ಪ್ರಕರಣ ದಾಖಲಿಸುವುದಿಲ್ಲ. ಕೊರೋನಾ ಸೋಂಕು ಏರಿಕೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ಏಪ್ರಿಲ್ 25ರಂದು ಮಾಸ್ಕ್ ಕಡ್ಡಾಯ ನಿಯಮ ಜಾರಿಗೆ ತರಲಾಗಿದ್ದು, ಈಗ ಕಟ್ಟುನಿಟ್ಟಾಗಿ ಪಾಲಿಸಲು ಕಡ್ಡಾಯಗೊಳಿಸಲಾಗಿದೆ. ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಈ ಕುರಿತಾಗಿ ಸುತ್ತೋಲೆ ಹೊರಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...