ಬೆಂಗಳೂರು: ರಾಜ್ಯದ ಎಲ್ಲಾ ಜನೌಷಧ ಕೇಂದ್ರಗಳಲ್ಲಿ 25 ರೂಪಾಯಿಗೆ N – 95 ಮಾಸ್ಕ್ ಲಭ್ಯವಾಗುವಂತೆ ಕ್ರಮಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಮಾಸ್ಕ್ ಗಳ ಕೊರತೆ ಎದುರಾಗದಂತೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ತಿಳಿಸಲಾಗಿದೆ. ಕೊರೋನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾದ ಪಿಐಎಲ್ ಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಎಲ್ಲ ಜನೌಷಧ ಮಳಿಗೆಗಳಲ್ಲಿ 25 ರೂಪಾಯಿಗೆ N – 95 ಮಾಸ್ಕ್ ಲಭ್ಯವಾಗಿರುವಂತೆ ವ್ಯವಸ್ಥೆ ಮಾಡಲು ಸೂಚಿಸಿದೆ.