
ಬೆಳಗಾವಿ: ಟಿಕೆಟ್ ತೋರಿಸಿ ಎಂದಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾದಲ್ಲಿ ಘಟನೆ ನಡೆದಿದೆ. ಟಿಸಿ ಹಾಗೂ ನಾಲ್ವರು ಪ್ರಯಾಣಿಕರ ಮೇಲೆ ಅಪರಿಚಿತ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಧಾರವಾಡದಿಂದ ಬೆಳಗಾವಿಯತ್ತ ಬರುತ್ತಿದ್ದ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನಲ್ಲಿ ಅಪರಿಚಿತ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಟಿಸಿ ಮತ್ತು ನಾಲ್ವರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.