ಕೊರೊನಾ ವೈರಸ್ ತಡೆಗಟ್ಟಲು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಅನಿವಾರ್ಯವಾಗಿದೆ. ಆದ್ರೆ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಶಿಫಾರಸ್ಸು ಮಾಡುವುದಿಲ್ಲವೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
ಆರರಿಂದ 11 ವರ್ಷದೊಳಗಿನ ಮಕ್ಕಳು ಮಾಸ್ಕ್ ಧರಿಸಬಹುದು. ಆದರೆ ಪೋಷಕರ ಮೇಲ್ವಿಚಾರಣೆಯಲ್ಲಿ ಮಾಸ್ಕ್ ಧರಿಸಬಹುದು. ವೈದ್ಯರ ಸಲಹೆ ನಂತ್ರ ಮಾಸ್ಕ್ ಧರಿಸುವುದು ಸೂಕ್ತವೆಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಡಿಜಿಎಚ್‌ಎಸ್ 18 ವರ್ಷ ಕಡಿಮೆ ವಯಸ್ಸಿನ ಮಕ್ಕಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಇದರಲ್ಲಿ ರೆಮ್‌ಡೆಸಿವಿರ್ ಅನ್ನು ಶಿಫಾರಸು ಮಾಡಲಾಗಿಲ್ಲ. ಎಚ್ ಆರ್ ಸಿ ಟಿ ಇಮೇಜಿಂಗ್‌ನ ತರ್ಕಬದ್ಧ ಬಳಕೆಗೆ ಒಪ್ಪಿಗೆ ನೀಡಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ರೆಮ್‌ಡೆಸಿವಿರ್‌ಗೆ ಸಂಬಂಧಿಸಿದಂತೆ ಸಾಕಷ್ಟು ಸುರಕ್ಷತೆ ಮತ್ತು ಪರಿಣಾಮಕಾರಿ ಮಾಹಿತಿಯ ಕೊರತೆಯಿದೆ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಸ್ಟಿರಾಯ್ಡ್ ಗಳನ್ನು ಬೇಕಾಬಿಟ್ಟಿ ಬಳಸುವಂತಿಲ್ಲ. ಸರಿಯಾದ ಸಮಯದಲ್ಲಿ, ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ಅವಧಿಗೆ ಮಾತ್ರ ಬಳಸಬೇಕೆಂದು ಹೇಳಲಾಗಿದೆ.