ಬೆಂಗಳೂರು : ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸದಿದ್ದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.
ಮಂಡ್ಯದಲ್ಲಿ ಕಾವೇರಿ ಕಿಚ್ಚು ತೀವ್ರಗೊಂಡಿದ್ದು,ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಶ್ರೀರಂಗಪಟ್ಟಣದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ನೇಣು ಕುಣಿಕೆಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಮುಖಂಡ ನಂಜುಂಡೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರೈತರಿಗೆ ನೇಣುಭಾಗ್ಯ ನೀಡುತ್ತಿದೆ. ತಮಿಳುನಾಡಿಗೆ ನೀರು ನಿಲ್ಲಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಮಾಡಿಕೊಳ್ಳುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದರು.
ಸದ್ಯ. ಕಾವೇರಿ ನೀರಿಗಾಗಿ ತಮಿಳುನಾಡು ಖ್ಯಾತೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.1 ಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ಮುಂದೂಡಿದೆ.ಕಾವೇರಿ ನೀರು ಹರಿಸಿ ಅಂತಾ ತಮಿಳುನಾಡು ಖ್ಯಾತೆ ತೆಗೆದಿದ್ದು, ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. . ಇವತ್ತು ಕಾವೇರಿ ಕದನ ಬಗ್ಗೆ ವಿಚಾರಣೆ ನಡೆದಿದ್ದು, ವಾದ ವಿವಾದ ಆಲಿಸಿದ ಕೋರ್ಟ್ ಈ ತಕ್ಷಣಕ್ಕೆ ಆದೇಶ ಹೊರಡಿಸುವುದು ಕಷ್ಟ ಎಂದು ಸೆ.1 ಕ್ಕೆ ವಿಚಾರಣೆ ಮುಂದೂಡಿದೆ. ಹಾಗೂ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಆ.28 ರಂದು ಸೋಮವಾರ ನವದೆಹಲಿಯಲ್ಲಿ ‘ಕಾವೇರಿ ನಿರ್ವಹಣಾ ಪ್ರಾಧಿಕಾರ’ದ ಮಹತ್ವದ ಸಭೆ ನಿಗದಿಯಾಗಿದೆ.