ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಉಂಟಾಗಿದೆ.
ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ವ್ಯಾಪಿಸಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಭಾಗದಲ್ಲಿ ಪ್ರದೇಶದಲ್ಲಿ ನೂರಾರು ಎಕರೆಗೆ ಕಾಡ್ಗಿಚ್ಚು ವ್ಯಾಪಿಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗೂ ಮಾಹಿತಿ ನೀಡಲಾಗಿದೆ.
ಭಾರೀ ಬೆಂಕಿಯ ಕಾರಣ ವನ್ಯಜೀವಿಗಳಿಗೂ ಅಪಾಯ ಎದುರಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
(ಸಾಂದರ್ಭಿಕ ಚಿತ್ರ)