ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಆತಂಕಕ್ಕೆ ಕಾರಣವಾಗಿದ್ದು, ಇದೀಗ ಈ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಮಾಹಿತಿ ನೀಡಿದ್ದಾರೆ. ಬಳ್ಳಾರಿಯ ಬಿಮ್ಸ್ ನಲ್ಲಿ ಬಾಣಂತಿಯರ ಸಾವಿಗೆ ಕೇವಲ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ. ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆಯೂ ಸಾವುಗಳಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
ಶಸ್ತ್ರಚಿಕಿತ್ಸಾ ಕೊಠಡಿಯ ಸ್ವಚ್ಛತೆ ಹಾಗೂ ನೈರ್ಮಲ್ಯ ಪರಿಶೀಲನೆ ನಡೆಸುವ ಅಗತ್ಯವಿದೆ. ಈ ಕಾರಣದಿಂದಲೂ ಸಾವು ಸಂಭವಿಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆಯೂ ಸಾವಿಗೆ ಕಾರಣವಾಗಿರಬಹುದು. ಶಸ್ತ್ರಚಿಕಿತ್ಸೆಯಾದ ಬಳಿಕ ನಂಜು, ಬ್ಯಾಕ್ಟೀರಿಯಾದಿಂದ ಇನ್ಫೆಕ್ಷನ್ ಆಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಶಸ್ರಚಿಕಿತ್ಸಾ ಕೊಠಡಿಯ ಗಾಳಿ, ಗೋಡೆ, ಟೇಬಲ್ ಇಡೀ ಹೆರಿಗೆ ಸ್ವ್ಯಾಬ್ ಸ್ಯಾಂಪಲ್ ವರದಿ ಬೇಕಿದೆ. ಶಸ್ತ್ರಚಿಕಿತ್ಸಾ ವಿಭಗದಿಂದಲೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಸ್ವಚ್ಛತೆ ಇಲ್ಲದಿದ್ದರೆ ಇನ್ಫೆಕ್ಷನ್ ಆಗಿ ಬಾಣಂತಿಯರು ಸಾವನ್ನಪ್ಪುತ್ತಾರೆ.
ಆಸ್ಪತ್ರೆಗೆ ದಾಖಲಾಗುವ ಗರ್ಭಿಣಿಯರ ಸಂಖ್ಯೆಯಲ್ಲಿಯೂ ಗಣನೀಯ ಇಳಿಕೆಯಾಗಿದೆ. ಹಾಗಾಗಿ ಈ ಬಗ್ಗೆಯೂ ಪರಿಶೀಲಿಸಬೇಕಿದೆ ಎಂದರು. ನಾಗಲಕ್ಷ್ಮೀ ಚೌದರಿ ಜಿಲ್ಲಾಸ್ಪತೆಗೆ ಭೇಟಿ ನೀಡಿ ಅಲ್ಲಿನ ಹೆರಿಗೆ ವಾರ್ಡ್, ಶಸ್ತ್ರಚಿಕಿತ್ಸಾ ಕೊಠಡಿ, ಆಸ್ಪತೆಗೆ ಸರಬರಾಜಾಗುವ ನೀರಿನ ಟ್ಯಾಂಕ್ ಗಳನ್ನು ಪರಿಶೀಲನೆ ನಡೆಸಿದರು,