
ಚಿತ್ರದುರ್ಗ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಶಾಂತಮ್ಮ (25) ಮೃತ ಬಾಣಂತಿ. ಚಿತ್ರದುರ್ಗ ತಾಲೂಕಿನ ಕಳ್ಳಿಹಟ್ಟಿಯ ನಿವಾಸಿ. ಬಾಣಂತಿ ಶಾಂತಮ್ಮ ಸಾವಿಗೆ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷವೇ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬಾಣಂತಿ ಶಾಂತಮ್ಮ ಮೃತಪಟ್ಟಿದ್ದು, ಆಸ್ಪತ್ರೆ ಬಳಿ ಮೃತಳ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.