
ಮನೋಹರ್ ಕಾಂಪಲ್ಲಿ ನಿರ್ದೇಶನದ ಸತೀಶ್ ನಿನಾಸಂ ಅಭಿನಯದ ಬಹು ನಿರೀಕ್ಷಿತ ‘ಮ್ಯಾಟ್ನಿ’ ಚಿತ್ರ ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಇತ್ತೀಚಿಗಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಸಿನಿಮಾ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು.
ಈ ಚಿತ್ರವನ್ನು f3 ಪ್ರೊಡಕ್ಷನ್ ಬ್ಯಾನರ್ ನಲ್ಲಿ ಪಾರ್ವತಿ ಗೌಡ ನಿರ್ಮಾಣ ಮಾಡಿದ್ದು ಸತೀಶ್ ನೀನಾಸಂ ಆದಿತಿ ಪ್ರಭುದೇವ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಶಿವರಾಜ್ ಕೆ.ಆರ್. ಪೇಟೆ, ಪೂರ್ಣಚಂದ್ರ ಮೈಸೂರು, ನಾಗಭೂಷಣ, ದಿಗಂತ್ ದಿವಾಕರ್, ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಕೆಎಂ ಪ್ರಕಾಶ್ ಸಂಕಲನ, ಮತ್ತು ಸುಧಾಕರ್ ರಾಜ್ ಛಾಯಾಗ್ರಹಣವಿದೆ. ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆ ನೀಡಿದ್ದಾರೆ.
