ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಗರ್ಭಿಣಿಮಹಿಳೆಯರಿಗೆ ಮಾತೃ ವಂದನಾ ಯೋಜನೆ ಅಡಿಯಲ್ಲಿ ಕರ್ನಾಟಕಕ್ಕೆ 615 ಕೋಟಿ ರೂ. ಬಿಡುಗಡೆ ಮಾಡಿದೆ.
ಈ ಕುರಿತು ಸಂಸದ ಪಿ.ಸಿ. ಮೋಹನ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ, ಮಾತೃ ವಂದನಾ ಯೋಜನೆಯಡಿ ಕರ್ನಾಟಕಕ್ಕೆ 615 ಕೋಟಿ ರೂ. ಬಿಡುಗಡೆಯಾಗಿದೆ. ಈ ಯೋಜನೆ ಕರ್ನಾಟಕದಲ್ಲಿ 20.72 ಲಕ್ಷ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, 3.36 ಕೋಟಿ ಜನರು ಲಾಭ ಪಡೆಯುತ್ತಿದ್ದಾರೆ. ಈ ಯೋಜನೆಯಡಿ ಗರ್ಭಿಣಿ ಹಾಗೂ ಹೆರಿಗೆ ಆದ ಮಹಿಳೆಯರಿಗೆ ಕೇಂದ್ರ ಸರ್ಕಾರ 3 ಕಂತಿನಲ್ಲಿ 6,000 ರೂ.ನೀಡುತ್ತದೆ.