ಬೆಂಗಳೂರು: ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯನ್ನು ಜಾರಿಗೆ ತಂದಿದ್ದು, ಎಪಿಎಲ್ ಮತ್ತು ಬಿಪಿಎಲ್ ಕುಟುಂಬದ ಮೊದಲ ಪ್ರಸವದ ಗರ್ಭಿಣಿ/ ಬಾಣಂತಿಯರಿಗೆ ಆರ್ಥಿಕ ನೆರವು ನೀಡಲಾಗುವುದು.
ಗರ್ಭಿಣಿಯರು, ಬಾಣಂತಿಯರಿಗೆ ಸಾಕಷ್ಟು ವಿಶ್ರಾಂತಿಗಾಗಿ, ಅವರ ವೇತನ ನಷ್ಟಕ್ಕಾಗಿ ನೀಡುವ ಸೌಲಭ್ಯ ಇದಾಗಿದ್ದು, 5 ಸಾವಿರ ರೂ.ಗಳನ್ನು ಮೂರು ಕಂತುಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಫಲಾನುಭವಿಗಳು ಈ ಸೌಲಭ್ಯ ಪಡೆಯಬಹುದು.
ಅರ್ಜಿಯೊಂದಿಗೆ ಫಲಾನುಭವಿ ಹಾಗೂ ಅವರ ಪತಿಯ ಆಧಾರ್ ಕಾರ್ಡ್ ಪ್ರತಿ, ತಾಯಿ ಮತ್ತು ಮಗು ಕಾರ್ಡ್, ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ವಿವರಗಳನ್ನು ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ಕಚೇರಿಗೆ ಭೇಟಿ ನೀಡಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.