ಹುಬ್ಬಳ್ಳಿ : ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ನಿರಂತರ ಅತ್ಯಾಚಾರ ಎಸಗಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಗುಲಾಮ ಜಿಲಾನಿ ಅಜಹರಿ ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೂ ಮೌಲ್ವಿ ಸೇರಿದಂತೆ 8 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಹುಬ್ಬಳ್ಳಿ ಮೂಲದ 23 ವರ್ಷದ ಯುವತಿ ಮಧ್ಯಪ್ರದೇಶದ ಖಂಡವಾದಲ್ಲಿರುವ ಮುಫ್ತಿ ಗುಲಾಮ ಜಿಲಾನಿ ಅಜಹರಿಯ ಮದರಸಾದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಅಲ್ಲಿ ಈಕೆಗೆ ಪರಿಚಯವಾದ ಮೌಲ್ವಿ ಆಕೆಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ 5 ಬಾರಿ ಗರ್ಭಪಾತ ಮಾಡಿಸಿದ್ದಾನೆ ಎಂದು ಹೇಳಲಾಗಿದೆ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ನಿನ್ನ ಕುಟುಂಬದ ಎಲ್ಲರನ್ನೂ ಮುಗಿಸುವುದಾಗಿ ಬೆದರಿಕೆಯೊಡ್ಡಿದ್ದನು. ಯುವತಿ ನೀಡಿದ ದೂರು ಸ್ವೀಕರಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.