ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ ಡಿಸೆಂಬರ್ 25 ರಂದು ಬಿಡುಗಡೆಯಾಗಲಿದೆ.
ಬಹು ಭಾಷೆಗಳಲ್ಲಿ ಮೂಡಿ ಬಂದಿರುವ ಚಿತ್ರವನ್ನು ವಿಜಯ್ ಕಾರ್ತಿಕೇಯ ನಿರ್ದೇಶಿಸಿದ್ದಾರೆ. ಆರಂಭದಿಂದಲೂ ಭಾರಿ ನಿರೀಕ್ಷೆ ಮೂಡಿಸಿದ್ದ ‘ಮ್ಯಾಕ್ಸ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಭಾರಿ ವೀಕ್ಷಣೆ ಕಂಡಿದೆ. ಸುದೀಪ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕ್ರಿಸ್ಮಸ್ ಹಬ್ಬದ ಹೊತ್ತಲ್ಲೇ ‘ಮ್ಯಾಕ್ಸ್’ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ. ಸಿನಿ ರಸಿಕರು ಚಿತ್ರ ನೋಡಲು ಕಾತರರಾಗಿದ್ದಾರೆ. ವರಲಕ್ಷ್ಮಿ ಶರತ್ ಕುಮಾರ್, ಸಂಯುಕ್ತ ಹೊರನಾಡು, ಸುನಿಲ್, ಪ್ರಮೋದ್ ಶೆಟ್ಟಿ, ಅನಿರುದ್ಧ್ ಭಟ್, ಸುಕೃತ ವಾಗ್ಲೆ ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.