ಬೆಂಗಳೂರು : ಹೆಚ್.ಡಿ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದರು.
ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ sಸಿದ್ದರಾಮಯ್ಯ ಹಾರೈಸಿದರು.
ಸುದ್ದಿಗೋಷ್ಟಿ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಪಡೆದ ಬಳಿಕ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜೆಡಿಎಸ್ ನಾಯಕ , ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದಾಗ ಅವರ ಮೂಗಿನಿಂದ ರಕ್ತ ಬರುತ್ತಿರುವುದನ್ನು ಗಮನಿಸಿದ್ದಾರೆ.
ರಕ್ತಸ್ರಾವವಾಗುತ್ತಿದ್ದಂತೆ ಸಚಿವರು ರಕ್ತವನ್ನು ಒರೆಸಲು ಪ್ರಯತ್ನಿಸಿದರು, ಆದರೆ ಅದು ಅವರ ಗಲ್ಲದಿಂದ ಇಳಿಯಲು ಪ್ರಾರಂಭಿಸಿತು ಮತ್ತು ನಂತರ ಎಲ್ಲರಿಗೂ ಕಾಣುವಂತೆ ಅವರ ಬಿಳಿ ಅಂಗಿಯ ಮೇಲೆ ಬಿದ್ದಿತ್ತು.