ಲಖನೌ: 4 ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ಮಾಯಾವತಿ ಅವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮುಖಭಂಗವಾಗಿದೆ.
ದಲಿತರ ಪಕ್ಷ ಎಂದು ಹೆಸರಾಗಿದ್ದ ಬಿಎಸ್ಪಿ ಪ್ರತಿಷ್ಠೆಗೆ ತೀವ್ರ ಪೆಟ್ಟು ಬಿದ್ದಿದೆ. ಉತ್ತರ ಪ್ರದೇಶದಲ್ಲಿ 80 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಎಸ್ಪಿ ಒಂದೂ ಕ್ಷೇತ್ರದಲ್ಲಿಯೂ ಗೆದ್ದಿಲ್ಲ. ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಮೈತ್ರಿಯ ಕಾರಣ ಬಿಎಸ್ಪಿಗೆ ಭಾರಿ ಹಿನ್ನಡೆಯಾಗಿದೆ.
2019ರಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಬಿಎಸ್‌ಪಿ 10 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಖಾತೆಯನ್ನೇ ತೆರೆದಿಲ್ಲ. ಇದರಿಂದಾಗಿ ಮಾಯಾವತಿಯವರೆಗೆ ಭಾರಿ ಮುಖಭಂಗವಾಗಿದೆ.