
ದಾವಣಗೆರೆ: ಮೆಕ್ಕೆಜೋಳದ ಜೊತೆಗೆ ತೊಗರಿ ಬಿತ್ತನೆಯನ್ನು ಕಡ್ಡಾಯಗೊಳಿಸಲು ಕೃಷಿ ಇಲಾಖೆ ಚಿಂತನೆ ನಡೆಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಮಣ್ಣಿನ ಫಲವತ್ತತೆ ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗುವುದು.
ರಾಜ್ಯದ ದಾವಣಗೆರೆ, ಚಿತ್ರದುರ್ಗ, ಹಾವೇರಿ ಸೇರಿದಂತೆ ಅನೇಕ ಭಾಗದಲ್ಲಿ ಮೆಕ್ಕೆಜೋಳ ಬೆಳೆಯಲಾಗುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯುತ್ತಿರುವುದರಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗುತ್ತಿದೆ. ಸಮತೋಲನ ಕಾಯ್ದುಕೊಂಡು ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆತು ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೃಷಿ ಇಲಾಖೆ ಕ್ರಮ ಕೈಗೊಂಡಿದೆ.
ಮೆಕ್ಕೆಜೋಳದ ಜೊತೆಗೆ ತೊಗರಿ ಬಿತ್ತನೆಯನ್ನು ಕಡ್ಡಾಯಗೊಳಿಸಲು ನಿಯಮ ಜಾರಿಗೆ ತರಲಾಗುತ್ತದೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಏಕರೂಪದ ಬೆಳೆಗಳಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗಿ ದುಷ್ಪರಿಣಾಮವುಂಟಾಗುತ್ತದೆ. ರಾಗಿ, ಜೋಳ, ಸಜ್ಜೆ, ಭತ್ತ ಮೊದಲಾದ ಬೆಳೆಗಳನ್ನು ಬೆಳೆಯುತ್ತಿದ್ದ ಬಹುತೇಕ ಪ್ರದೇಶಗಳನ್ನು ಮೆಕ್ಕೆಜೋಳ ಆವರಿಸಿದೆ. ಇದನ್ನು ತಡೆಯಲು ಏಕಬೆಳೆ ಬದಲಿಗೆ ಮಿಶ್ರ ಬೆಳೆ ಬೆಳೆಯಲು ಸಲಹೆ ನೀಡಲಾಗುವುದು. ತೊಗರಿ ಕಡ್ಡಾಯಗೊಳಿಸುವುದು ಎಂದು ಹೇಳಲಾಗಿದೆ.