ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ (BJP government) ಆರ್ ಎಸ್ಎಸ್ (RSS) ಅಂಗ ಸಂಸ್ಥೆಗೆ ಭೂಮಿ ನೀಡಿರುವ ವಿಚಾರದ ಬಗ್ಗೆ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ (Minister M.B. Patil) ಮಹತ್ವದ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಎಂ.ಬಿ.ಪಾಟೀಲ್, ಯಾವುದೇ ಸಂಸ್ಥೆಗೆ ನೀಡಿದ್ದ ಭೂಮಿಯನ್ನು ಹಿಂಪಡೆಯುವ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಭೂಮಿ ನೀಡಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರವು ಯಾವ ಯಾವ ಸಂಸ್ಥೆಗಳಿಗೆ ಭೂಮಿ ನೀಡಲಾಗಿದೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಯಾವ ರೀತಿ ಭೂಮಿ ಉಪಯೋಗವಾಗುತ್ತಿದೆ ಅನ್ನೋದು ಮುಖ್ಯವಾಗುತ್ತದೆ. ಎಲ್ಲೆಲ್ಲಿ ಭೂಮಿ ನೀಡಲಾಗಿದೆ? ಅನ್ನುವ ಮಾಹಿತಿ ಪಡೆದುಕೊಳ್ಳುತ್ತೇವೆ. ಆದರೆ ಸದ್ಯಕ್ಕೆ ಕೊಟ್ಟಿರುವ ಭೂಮಿಯನ್ನು ಹಿಂಪಡೆಯುವ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿಗೆ ಸೋಲಾಗಿದೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಎಂ.ಬಿ.ಪಾಟೀಲ್, ಪ್ರತಾಪ್ ಸಿಂಹ ಸುಮ್ಮನೆ ಹೀಗೆ ಹೇಳೋದು ಬೇಡ. ಹೊಂದಾಣಿಕೆ ಮಾಡಿಕೊಂಡವರ ಹೆಸರು ಬಹಿರಂಗಪಡಿಸಬೇಕು ಎಂದು ಸವಾಲು ಹಾಕಿದ್ದಾರೆ.