ಬೆಂಗಳೂರು: ರಾಜ್ಯದಲ್ಲಿ ಅತಿ ಶೀಘ್ರವೇ 2ನೇ ಏರ್ಪೋರ್ಟ್ ನಿರ್ಮಾಣವಾಗಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಬೆಂಗಳೂರಲ್ಲಿ ಎರಡನೇ ಏರ್ಪೋರ್ಟ್ ಸ್ಥಾಪನೆ ಸಂಬಂಧ ನಡೆದ ಸಭೆಯ ಬಳಿಕ ಅವರು ಮಾತನಾಡಿ, ವಿಮಾನ ನಿಲ್ದಾಣ ನಿರ್ಮಾಣಕ್ಕೆ 7 ಸ್ಥಳಗಳು ಗಮನಕ್ಕೆ ಇವೆ. ಸಾಧಕ -ಬಾಧಕಗಳ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಹೊಸ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ. ಬೆಂಗಳೂರು ನಗರ ಹಾಗೂ ರಾಜ್ಯದ ಜನರಿಗೆ ಅನುಕೂಲವಾಗಬೇಕು. ರಾಜಕೀಯ ಬಿಟ್ಟು ಎಲ್ಲರಿಗೂ ಅನುಕೂಲ ಆಗುವ ನಿರ್ಧಾರ ಆಗಬೇಕಿದೆ ಎಂದು ಹೇಳಿದ್ದಾರೆ.