ಬೆಂಗಳೂರು: ಹಂಚಿಕೆಯಾದ ಕೈಗಾರಿಕಾ ನಿವೇಶನಗಳಿಗೆ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡದಿದ್ದರೆ ಅಂತಹ ನಿವೇಶನಗಳನ್ನು ಪತ್ತೆ ಹಚ್ಚಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ಇಲಾಖೆಯ ಸಭೆ ನಡೆಸಿದ ಸಚಿವರು, ಹಂಚಿಕೆ ಮಾಡಿರುವ ಕೈಗಾರಿಕೆ ನಿವೇಶನಗಳಿಗೆ ಕೆಲವರು ಶೇಕಡ 30ರಷ್ಟು ಮಾತ್ರ ಹಣ ಕಟ್ಟಿ ಸುಮ್ಮನಾಗಿದ್ದಾರೆ. ಈ ರೀತಿ ಇರುವ ನಿವೇಶನಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಕೈಗಾರಿಕಾ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಹೊಸ ಕೈಗಾರಿಕೆ ಪ್ರದೇಶಗಳ ಅಭಿವೃದ್ಧಿಗೆ ಸರ್ವೆ ನಡೆಸಬೇಕು ಎಂದು ತಿಳಿಸಿದ್ದಾರೆ.