ಬೆಂಗಳೂರು: ರಾಜ್ಯದಾದ್ಯಂತ ಉನ್ನತ ದರ್ಜೆಯ 100 ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎಸ್ಐಎಲ್ ನಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದೆ. ರಾಜ್ಯದಲ್ಲಿ 100 ಉನ್ನತ ದರ್ಜೆಯ ಮದ್ಯ ಮಾರಾಟ ಮಳಿಗೆಗಳನ್ನು ಆರಂಭಿಸಲಾಗುವುದು. ಮೊದಲ ಹಂತದಲ್ಲಿ 30 ಮಳಿಗೆಗಳನ್ನು ತೆರೆಯಲಿದ್ದು, ಇವುಗಳಲ್ಲಿ ಬೆಂಗಳೂರು ನಗರದಲ್ಲಿ 10 ಮಳಿಗೆಗಳನ್ನು ತೆರೆಯಲಾಗುತ್ತದೆ. ರಾಜ್ಯ ವಿವಿಧೆಡೆ ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.