ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ನೀಟ್ ಯುಜಿ ಸೀಟು ಹಂಚಿಕೆಯ ಮೊದಲ ಹಂತದ ಫಲಿತಾಂಶ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಪ್ರಕಟಿಸಲಿದೆ.
ತಾಂತ್ರಿಕ ದೋಷದಿಂದಾಗಿ ಅಣಕು ಹಂಚಿಕೆ ಪಟ್ಟಿಯಲ್ಲಿ ಹಲವರ ಹೆಸರು ಕೈ ಬಿಟ್ಟು ಹೋಗಿ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಬಳಿಕ ಪರಿಶೀಲನೆ, ಬದಲಾವಣೆ ಅವಕಾಶ ನೀಡಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೀಟು ಹಂಚಿಕೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಲಿದೆ.
ರಾಜ್ಯದ ವೈದ್ಯ ಕಾಲೇಜುಗಳಲ್ಲಿ ಪ್ರಸ್ತುತ 11,695 ಎಂಬಿಬಿಎಸ್ ಸೀಟುಗಳು ಲಭ್ಯವಿದ್ದು, ಇವುಗಳಲ್ಲಿ ಶೇಕಡ 85 ಸೀಟುಗಳನ್ನು ರಾಜ್ಯ ಕೋಟಾದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಹಂಚಿಕೆ ಮಾಡಲಾಗುವುದು ಎಂದು ಹೇಳಲಾಗಿದೆ.