ಬೆಳಗಾವಿ : ಶೀಘ್ರದಲ್ಲೇ ರಾಜ್ಯದಲ್ಲಿ ‘ ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿ ‘ರಾಜ್ಯ ಶಿಕ್ಷಣ ನೀತಿ’ ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ 2 ವರ್ಷಗಳ ಹಿಂದೆ ಹಿಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ತಂದಿತ್ತು, ಇದರಲ್ಲಿ ಹಲವು ನ್ಯೂನತೆಗಳು ಇದೆ. ಇದನ್ನು ರದ್ದು ಮಾಡಿ ರಾಜ್ಯ ಶಿಕ್ಷಣ ನೀತಿ’ ಜಾರಿಗೆ ತರುತ್ತೇವೆ ಎಂದರು. ಎಲ್ಲವನ್ನೂ ಶಿಕ್ಷಣ ತಜ್ಞರ ಜೊತೆ ಚರ್ಚಿಸಿ ತೀರ್ಮಾನಕ್ಕೆ ಬರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ‘ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದಿದ್ದು, ಇದನ್ನು ರದ್ದು ಮಾಡಲು ಸರ್ಕಾರ ಚಿಂತನೆ ನಡೆದಿದೆ. ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸುವ ವಿಚಾರಕ್ಕೆ ಪರ ವಿರೋಧ ಟೀಕೆಗಳು ವ್ಯಕ್ತವಾಗುತ್ತಿದೆ.