ಚಿಕ್ಕಬಳ್ಳಾಪುರ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕರ ಹುದ್ದೆಗಳಿಗೆ 7 ಸಾವಿರ ಮಂದಿ ನೇಮಕ ಮಾಡಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಚಿಂತಾಮಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ಕಾಲೇಜು ಅಭಿವೃದ್ಧಿ ಸಮಿತಿ ಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಈ ವಿಷಯ ತಿಳಿಸಿದ್ದಾರೆ.
ಕಳೆದ ಐದು ವರ್ಷದ ಅವಧಿಯಲ್ಲಿ ವಿದ್ಯಾರ್ಥಿಗಳು, ಕಾಲೇಜುಗಳ ಸಂಖ್ಯೆ ಹೆಚ್ಚಾಗಿದ್ದು, ಹೊಸ ಕೋರ್ಸ್ ಗಳನ್ನು ಕೂಡ ಆರಂಭಿಸಲಾಗಿದೆ. ಬೋಧಕ ವರ್ಗ ಮತ್ತು ಸಿಬ್ಬಂದಿ ನೇಮಕವಾಗಿಲ್ಲ. ಹೀಗಾಗಿ ಹೆಚ್ಚಿನ ಸರ್ಕಾರಿ ಕಾಲೇಜುಗಳಲ್ಲಿ ಹುದ್ದೆಗಳು ಖಾಲಿ ಇವೆ. ಸದ್ಯಕ್ಕೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲಾಗಿದ್ದು, ಬೋಧಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ ಎಂದು ಹೇಳಿದ್ದಾರೆ.