ಶುಭ ಸುದ್ದಿ: ಸರ್ಕಾರದಿಂದ 2.5 ಲಕ್ಷ ಹುದ್ದೆಗಳ ಭರ್ತಿ: ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ಚುನಾವಣೆ ಸಮಯದಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿರುವಂತೆ ನಮ್ಮ ಸರ್ಕಾರ ಮುಂದಿನ ಐದು ವರ್ಷಗಳ ಅಧಿಕಾರ ಅವಧಿಯಲ್ಲಿ 2.5 ಲಕ್ಷ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯಿಂದ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ನೂತನವಾಗಿ ನೇಮಕಗೊಂಡ ಸಹಾಯಕ ಪ್ರಾಧ್ಯಾಪಕರಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

2.5 ಲಕ್ಷ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗಿದೆ. ಮುಂದಿನ ತಿಂಗಳ ಅಂತ್ಯದ ವೇಳೆಗೆ 20 ವರ್ಷಗಳ ಬಳಿಕ 310 ಮಂದಿ ಪದವಿ ಕಾಲೇಜುಗಳ ಪ್ರಾಂಶುಪಾಲರ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಕಾಲೇಜುಗಳಲ್ಲಿ ಸಾಕಷ್ಟು ಸವಾಲುಗಳಿದ್ದು, ಖಾಸಗಿ ಕಾಲೇಜುಗಳೊಂದಿಗೆ ಪೈಪೋಟಿ ನಡೆಸಬೇಕಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಶ್ರಮಿಸುವ ಜವಾಬ್ದಾರಿ ಬೋಧಕರ ಮೇಲಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read