ಮಂಗಳೂರು: ರಾಜ್ಯದಲ್ಲಿ ಶಾಲೆಗಳು ವಿಳಂಬವಾಗಿ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯ ಮಕ್ಕಳು ಶಾಲೆಗೆ ಆಗಮಿಸತೊಡಗಿದ್ದಾರೆ. ಆದರೆ, ಬಿಸಿಊಟ ಇಲ್ಲದ ಕಾರಣ ಅನೇಕ ಮಕ್ಕಳಿಗೆ ತೊಂದರೆಯಾಗಿದೆ. ಶಿಕ್ಷಣ ಇಲಾಖೆ ಬಿಸಿಯೂಟ ಯೋಜನೆ ಆರಂಭಿಸಲು ಸಿದ್ಧತೆ ನಡೆಸಿದ್ದರೂ ಕೂಡ ಇನ್ನೂ ಅನುಮತಿ ನೀಡಿಲ್ಲವೆನ್ನಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ಮಂಗಳೂರು ಪುರಭವನದಲ್ಲಿ ಮುಖ್ಯ ಶಿಕ್ಷಕರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಬಿಸಿಯೂಟ ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧವಾಗಿದ್ದರೂ, ಕೇಂದ್ರ ಸರ್ಕಾರದ ಸಮ್ಮತಿ ಸಿಕ್ಕಿಲ್ಲ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ 1 ರಿಂದ ತರಗತಿ ಆರಂಭಿಸಲು ಸಮ್ಮತಿಸಿಲ್ಲ ಎಂದು ಅವರು ತಿಳಿಸಿದ್ದಾರೆ.