ಚಿತ್ರದುರ್ಗ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿತ್ರದುರ್ಗದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಅಸ್ವಸ್ಥ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕಿತ್ಸೆ ಬಳಿಕ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗ ನಗರ ಠಾಣೆ ಸಿಪಿಐ ತಿಪ್ಪೇಸ್ವಾಮಿ ಹಾಗೂ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಧ್ಯಾಹ್ನದ ಬಿಸಿಯೂಟದ ನಂತರ ಮಕ್ಕಳಿಗೆ ಶೇಂಗಾ ಚಿಕ್ಕಿ ನೀಡಲಾಗಿದೆ. ಇದನ್ನು ತಿಂದ ಬಳಿಕ ವಾಂತಿಯಾಗಿ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.