alex Certify ವೇತನ, ಪಿಂಚಣಿ ಸೌಲಭ್ಯದ ನಿರೀಕ್ಷೆಯಲ್ಲಿದ್ದ ಬಿಸಿಯೂಟ ಸಿಬ್ಬಂದಿಗೆ ಬಿಗ್ ಶಾಕ್: ಕನಿಷ್ಠ ವೇತನ ಕಾಯ್ದೆಯಡಿ ಬರಲ್ಲ: ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇತನ, ಪಿಂಚಣಿ ಸೌಲಭ್ಯದ ನಿರೀಕ್ಷೆಯಲ್ಲಿದ್ದ ಬಿಸಿಯೂಟ ಸಿಬ್ಬಂದಿಗೆ ಬಿಗ್ ಶಾಕ್: ಕನಿಷ್ಠ ವೇತನ ಕಾಯ್ದೆಯಡಿ ಬರಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಕನಿಷ್ಠ ವೇತನ ನಿರೀಕ್ಷೆಯಲ್ಲಿದ್ದ ಬಿಸಿಯೂಟ ಸಿಬ್ಬಂದಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕನಿಷ್ಠ ವೇತನ ಕಾಯ್ದೆಯಡಿ ಬಿಸಿಯೂಟ ಸಿಬ್ಬಂದಿ ಬರುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ರಾಜ್ಯ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಅಡುಗೆ ತಯಾರಕರು ಕನಿಷ್ಠ ವೇತನ ಕಾಯ್ದೆಯಡಿ ವೇತನ ಪಡೆಯಲು ಅರ್ಹರಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ.

ಬಿಸಿಯೂಟ ತಯಾರಿಸುವ ಮುಖ್ಯ ಅಡುಗೆ ತಯಾರಕರು ಹಾಗೂ ಅಡುಗೆ ಸಹಾಯಕರಿಗೆ ಕನಿಷ್ಠ ವೇತನ ಕಾಯ್ದೆಯಡಿ ವೇತನ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗಿಯ ನ್ಯಾಯಪೀಠ ಈ ಆದೇಶ ನೀಡಿದೆ. ಕನಿಷ್ಠ ವೇತನದ ಕಾಯ್ದೆಯಲ್ಲಿ ಉಲ್ಲೇಖಿಸಲಾದ ಅಧಿಸೂಚಿತ ಉದ್ಯೋಗಗಳಿಗೆ ಮಾತ್ರ ಕಾಯ್ದೆಯ ನಿಯಮಗಳು ಅನ್ವಯವಾಗುತ್ತವೆ. ಕರ್ನಾಟಕ ಕನಿಷ್ಠ ವೇತನ ಕಾಯ್ದೆಗಳ ನಿಯಮದ ಪ್ರಕಾರ, ಕೆಲಸದ ಅವಧಿ 9 ಗಂಟೆ ಆಗಿರಬೇಕು. ದಿನಕ್ಕೆ ಕೇವಲ 4 ಗಂಟೆಯಷ್ಟು ಸೀಮಿತ ಅವಧಿಗೆ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಬಿಸಿಯೂಟ ಸಿಬ್ಬಂದಿಗೆ ಈ ನಿಯಮ ಅನ್ವಯವಾಗುವುದಿಲ್ಲ ಎಂದು ಹೇಳಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...